ಡಿ.30ರಂದು ಬರಗೂರು ರಾಮಚಂದ್ರಪ್ಪ ಬರೆದಿರುವ ಜನಪದ ನಾಯಕ ಡಾ.ರಾಜ್ ಕುಮಾರ್ ಪುಸ್ತಕ ಲೋಕಾರ್ಪಣೆ

ಬೆಂಗಳೂರು,ಡಿ.26- ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪನವರು ಬರೆದಿರುವ ಜನಪದ ನಾಯಕ ಡಾ.ರಾಜ್‍ಕುಮಾರ್ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಇದೇ 30ರಂದು ಬೆಳಗ್ಗೆ 10.30ಕ್ಕೆ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಜನ ಪ್ರಕಾಶ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಾ.ಎಚ್.ಎಸ್.ರಾಮವೇಂದ್ರರಾವ್ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ನಟಿ ತಾರಾ ಅನುರಾಧ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ರಾಘವೇಂದ್ರ ರಾಜ್‍ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

10.30ರಿಂದ 11.15ರವರೆಗೆ ಗಾಯಕಿ ಶಮಿತಾ ಮಲ್ನಾಡ್ ಮತ್ತು ತಂಡದವರಿಂದ ಡಾ.ರಾಜ್‍ಕುಮಾರ್ ಚಿತ್ರಗೀತೆಗಳನ್ನು ಹಾಡಲಿದ್ದಾರೆ.

ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳು ಒಕ್ಕೂಟ, ಕನ್ನಡ ಜನಶಕ್ತಿ ಕೇಂದ್ರ, ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಸದ್ಭಾವನಾ ಪ್ರತಿಷ್ಠಾನ ರಾಜರಾಜೇಶ್ವರಿ ಸಿನಿ ಆಟ್ರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ