
ಬೆಳಗಾವಿ, ಡಿ.26- ಖಾತೆ ನಿಗದಿ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇಂಥದ್ದೇ ಖಾತೆ ನೀಡಿ ಎಂಬ ಬಗ್ಗೆ ಡಿಮ್ಯಾಂಡ್ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಇಂದು ಬೆಳ್ಳಿಗೆ ಬೆಳಗಾವಿ ಮಹಾನಗರ ಪಾಲಿಕೆ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತ ಶಮನಕ್ಕೆ ಎಲ್ಲರೂ ಪ್ರಯತ್ನ ಮಾಡುತ್ತಿದ್ದಾರೆ. ಶಾಸಕ ರಮೇಶ ಜಾರಕಿಹೊಳಿಯನ್ನು ಹುಡುಕಿ ಹುಡಕಿ ಭೇಟಿ ಆಗಬೇಕಿದೆ. ಮೊದಲಿನಿಂದ ರಮೇಶ ಜಾರಕಿಹೊಳಿ ಹಾಗೇಗೆ ಇದ್ದಾರೆ. ರಾಜಕೀಯವಾಗಿ ಅವರಿಗೆ ಏನು ಹೇಳಬೇಕೋ ಅದನ್ನು ಹೇಳುವ ಪ್ರಯತ್ನ ಮಾಡಿದ್ದೇನೆ ಎಂದರು.
ಆರು ತಿಂಗಳಿನಿಂದ ಬಿಜೆಪಿಯವರು ಆಪರೇಷನ್ ಬಗ್ಗೆ ಹೇಳುತ್ತಲೇ ಇದ್ದಾರೆ. ಅಸಮಾಧಾನ ಇತ್ಯರ್ಥ ಪಡಿಸುತ್ತೇವೆ. ಯಾರು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಶಾಸಕ ರಮೇಶ ಜಾರಕಿಹೊಳಿ ಯಾವುದೇ ಬೇಡಿಕೆ ಇಟ್ಟಿಲ್ಲ. ನನ್ನ ಮೇಲೆ ಅವರಿಗೆ ಯಾವುದೇ ಮುನಿಸಿಲ್ಲ. ಅವರು ಸಾಕಷ್ಟು ಬದಲಾವಣೆ ಆಗಬೇಕು ಎಂದು ಹೇಳಿದರು.