ಬಾಪೂಜಿ ನಗರದಲ್ಲಿ ಡಿ.28ರಂದು ನಾಡದೊರೆ ಕೆಂಪೇಗೌಡ ಉತ್ಸವ

ಬೆಂಗಳೂರು, ಡಿ.26- ಕೆಂಪೇಗೌಡ ಯೂತ್ ಫೌಂಡೇಶನ್ ಟ್ರಸ್ಟ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದೊಂದಿಗೆ 13ನೇ ನೆನಪು ನಾಡದೊರೆ ಕೆಂಪೇಗೌಡ ಉತ್ಸವ ಹಾಗೂ ಅಂಬಿ ನೆನಪು ಕಾರ್ಯಕ್ರಮವನ್ನು ಇದೇ 28ರಂದು ಬಾಪೂಜಿನಗರದ ಬೀರೇಶ್ವರ ದೇವಸ್ಥಾನ ರಸ್ತೆಯಲ್ಲಿ ಆಯೋಜಿಸಲಾಗಿದೆ.

ನಾಡಪ್ರಭು ಕೆಂಪೇಗೌಡರ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಸಂಜೆ 5.30ಕ್ಕೆ ಸಂಗೀತ ಸಂಜೆ ಮತ್ತು ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಚಲನಚಿತ್ರ ನಟ-ನಟಿಯರು ಪಾಲ್ಗೊಳ್ಳಲಿದ್ದಾರೆ.

ಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಅಧ್ಯಕ್ಷರಾದ ಶ್ರೀ ಸೌಮ್ಯನಾಥ ಮಹಾಸ್ವಾಮೀಜಿ ಹಾಗೂ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಶಾಸಕ ಎಂ.ಕೃಷ್ಣಪ್ಪ, ಮಾಜಿ ಶಾಸಕ ಪ್ರಿಯಾಕೃಷ್ಣ, ಮಾಜಿ ಉಪ ಮಹಾಪೌರರದ ಎಂ.ಲಕ್ಷ್ಮೀನಾರಾಯಣ್ ಅಧ್ಯಕ್ಷತೆ ವಹಿಸಲಿದ್ದು, ಕರವೇ ರಾಜ್ಯಾಧ್ಯಕ್ಷ ಪ್ರವೀಣ್‍ಕುಮಾರ್ ಶೆಟ್ಟಿ, ನಗರ ಕಸಾಪ ಅಧ್ಯಕ್ಷ ಶಿವಾನಂದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥನಾರಾಯಣ್, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ, ಸಮಾಜ ಸೇವಕ ಧರ್ಮಪಾಲ್, ಬಿಬಿಎಂಪಿ ಸದಸ್ಯರಾದ ಅನುಪಮಾ ಧರ್ಮಪಾಲ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ