ಬೆಂಗಳೂರು, ಡಿ.26- ನಾವು ಯಾವುದೇ ಖಾತೆಗಾಗಿ ಬೇಡಿಕೆ ಇಟ್ಟಿಲ್ಲ. ಪಕ್ಷ ವಹಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ನೂತನ ಸಚಿವರಾದ ರಹೀಂಖಾನ್ ಮತ್ತು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ.
ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈ ಇಬ್ಬರು ಸಚಿವರು, ತಮಗೆ ಇಂಥದ್ದೇ ಖಾತೆ ಬೇಕೆಂದು ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.
ಸಚಿವರಾದ ನಂತರ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಅವರ ಸಹಕಾರ ಕೇಳಿದ್ದೇವೆ ಎಂದರು.
ರಹೀಂಖಾನ್ ಮಾತನಾಡಿ, ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.