ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ತುಮಕೂರು: 15 ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ, ಪದ್ಮಶ್ರೀ ಪುರಸ್ಕೃತೆ ಸೂಲಗಿತ್ತಿ ನರಸಮ್ಮನವರ ಮರಣ ದುಃಖ ತಂದಿದೆ. ಕರ್ನಾಟಕದಲ್ಲಿ ಅವರ ಸೇವೆ ಅನನ್ಯ. ಅದೆಷ್ಟೋ ದುರ್ಬಲ ವರ್ಗದ ಮಹಿಳೆಯರಿಗೆ ಪ್ರಸವ ಮಾಡಿಸಿದ್ದಾರೆ. ಅವರ ಕರುಣೆ ಇಷ್ಟವಾಯಿತು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಹೇಳಿದ್ದಾರೆ.

ಸೂಲಗಿತ್ತಿ ನರಸಮ್ಮ ಮಂಗಳವಾರ ನಿಧನರಾಗಿದ್ದಾರೆ. ಅವರು 25 ದಿನಗಳಿಂದ ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ