ಧರ್ಮಶಾಲಾ: ಹಿಮಾಚಲ ಪ್ರದೇಶವು ದೇಶದ ಗಡಿ ರಕ್ಷಣೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ವೀರ ಯೋಧರ ಪುಣ್ಯಭೂಮಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಏರ್ಪಡಿಸಲಾಗಿದ್ದ ‘ಜನ್ ಆಭಾರ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಧರ್ಮಶಾಲಾ ನನಗೆ ಮನೆಯ ಹಾಗೆ. ಇಲ್ಲಿ ಅನೇಕ ವರ್ಷಗಳ ಕಾಲ ನಾನು ಪಕ್ಷಕ್ಕಾಗಿ ಕೆಲಸ ಮಾಡಿಕೊಂಡಿದ್ದೆ. ಆಗ ರಾಜ್ಯಾದಂತ್ಯ ಓಡಾಡಿಕೊಂಡಿದ್ದ ನನಗೆ ಅನೇಕ ಅನುಭವಗಳಾಗಿವೆ. ಅನೇಕ ಹಿರಿಯ ನಾಯಕರೊಂದಿಗೆ ನಾನಿಲ್ಲಿ ಕೆಲಸ ಮಾಡಿದ್ದೇನೆ ಎಂದರು.
ಹಿಮಾಚಲ ಪ್ರದೇಶದ ವಿವಿಧ ಪ್ರದೇಶಗಳಲ್ಲಿ 26 ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಗಳನ್ನು ಒಳಗೊಂಡ ಕಿರು ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.