ವಿಶ್ವ ಮೆಮೋರಿ ಚಾಂಪಿಯನ್ ಶಿಪ್ಪಿನಲ್ಲಿ ಭಾಗವಹಿಸಿ ರಾಷ್ರಕ್ಕೆ ಮತ್ತು ಬಿಜಿಎಸ್ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿನಿ ಅನನ್ಯ ಮತ್ತು ವಿದ್ಯಾರ್ಥಿ ಚಿನ್ಮಯಿ

ಬೆಂಗಳೂರು,ಡಿ.27-ಚಿಕ್ಕಬಳ್ಳಾಪುರದಲ್ಲಿರುವ ಬಿಜಿಎಸ್ ವಲ್ರ್ಡ್ ಸ್ಕೂಲ್‍ನ ವಿದ್ಯಾರ್ಥಿನಿ ಅನನ್ಯ ಚೀನಾದ ಹಾಂಕಾಂಗ್‍ನಲ್ಲಿ ನಡೆದ 27ನೇ ವಲ್ಡ್ ಮೆಮೋರಿ ಚಾಂಪಿಯನ್‍ಶಿಪ್‍ನಲ್ಲಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದರೆ , ಇದೇ ಸ್ಪರ್ಧೆಯಲ್ಲಿ ಪಾಲ್ಗೊಂಡ 6ನೇ ತರಗತಿಯ ಚಿನ್ಮಯಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 27 ವರ್ಷದ ಇತಿಹಾಸದಲ್ಲಿ ಯಾರೂ ಮಾಡಿರದ ಸಾಧನೆಯನ್ನು ಈ ವಿದ್ಯಾರ್ಥಿಗಳು ಮಾಡಿದ್ದಾರೆ. ಪ್ರಥಮ ಪ್ರಯತ್ನದಲ್ಲಿ ಪ್ರಪ್ರಥಮ ಚಾಂಪಿಯನ್ ಆಗಿ ಹೊರಹೊಮ್ಮಿರುವ ಅನನ್ಯ ಬಿಜಿಎಸ್ ಶಾಲೆ ಮತ್ತು ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ ಎಂದರು.

ಡಿ.22ರಂದು ಚೀನಾದ ಹಾಂಕಾಂಗ್‍ನಲ್ಲಿ ನಡೆದ ಸ್ಪರ್ಧೆಯಲ್ಲಿ ಬಿಜಿಎಸ್ ವಲ್ರ್ಡ್ ಸ್ಕೂಲ್ ವಿದ್ಯಾರ್ಥಿಗಳು ಪಾಲ್ಗೊಂಡು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬಡ ರೈತನ ಮಗಳಾದ ಅನನ್ಯ ಚಾಂಪಿಯನ್ ಆಗುವ ಮೂಲಕ ಶಾಲೆಗೆ ಹೆಸರು ತಂದಿದ್ದಾರೆ ಎಂದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿ ಗ್ರಾಮೀಣ ಭಾಗದಲ್ಲಿ ಆದಿಚುಂಚನಗಿರಿ ಶಿಕ್ಷಣದ ಟ್ರಸ್ಟ್‍ನ್ನು ಆರಂಭಿಸಿದ್ದರು. ಆ ಟ್ರಸ್ಟ್‍ನ ಮೂಲಕ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿರುವುದಲ್ಲದೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗಿದೆ.

ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ ಪೆÇ್ರೀ ಉದ್ದೇಶದಿಂದ ಸ್ಪರ್ಧೆ ಏರ್ಪಡಿಸಲಾಗುತ್ತಿದೆ. ಮಕ್ಕಳ ಪ್ರತಿಭೆ ವಿಕಸನಕ್ಕೆ ವೇದಿಕೆ ಒದಗಿಸುವುದು, ರಾಷ್ಟ್ರಮಟ್ಟದಲ್ಲಿ ಬೆಳೆಯಲು ಅವಕಾಶ ಕಲ್ಪಿಸುವ ಉದ್ದೇಶವೂ ಮಠಕ್ಕಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ರಾಜ್ಯ ಮಟ್ಟದಲ್ಲಿ ಅಂತರಾಶಾಲಾ ಕ್ರೀಡಾಕೂಟ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ಅಲ್ಲಿ ಹೊರಹೊಮ್ಮುವ ವಿದ್ಯಾರ್ಥಿಗಳು ಮತ್ತು ಸಮಸ್ತ ತಂಡ ಪ್ರಶಸ್ತಿಗಳನ್ನು ಗಳಿಸುತ್ತಿದೆ. ಆ ಮೂಲಕ ಆದಿಚುಂಚನಗಿರಿ ಮಠದ ಶ್ರೇಷ್ಠತೆಯನ್ನು ಸಾರುತ್ತಿವೆ ಎಂದು ಹೇಳಿದರು.

ಆದಿಚುಂಚನಗಿರಿ ಶ್ರೀಕ್ಷೇತ್ರ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಶಿಕ್ಷಣ ನೀಡುವ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದೆ ಎಂದರು.

ಇದೇ ವೇಳೆ ಶ್ರೀ ಸೌಮ್ಯನಾಥ ಸ್ವಾಮೀಜಿ ಚಾಂಪಿಯನ್ ಆದ ಅನನ್ಯ ಹಾಗೂ ಚಿನ್ಮಯಿ ಅವರನ್ನು ಸನ್ಮಾನಿಸಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೊ.ಶಿವರಾಮರೆಡ್ಡಿ, ಬಿಜಿಎಸ್ ವಲ್ರ್ಡ್ ಸ್ಕೂಲ್‍ನ ಪ್ರಾಂಶುಪಾಲ ಆರ್.ಕೆ.ಮೆಂಡಲ್, ಡಾ.ಜಿ.ಫ್ರಾನ್ಸಿಸ್ ಗ್ಸೇವಿಯರ್ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ