ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ; ದೆಹಲಿಯಲ್ಲಿ ಇಂದು ರಾಜ್ಯ ಸಂಸದರ ಪ್ರತಿಭಟನೆ

ಹೊಸದಿಲ್ಲಿ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ  ರಾಜ್ಯದ ಸಂಸದರು ಇಂದು ಸಂಸತ್​ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಮೇಕೆದಾಟು ಯೋಜನೆಗೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಅನುಮತಿ ನೀಡಿರುವುದನ್ನು ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು ಸರ್ಕಾರ ಈ ಯೋಜನೆಗೆ ತಡೆ ಕೋರುವಂತೆ ಪ್ರಧಾನಿಗೆ ಪತ್ರ ಬರೆದಿದ್ದರು . ಅಲ್ಲದೇ, ಚಳಿಗಾಲ ಅಧಿವೇಶನ ವೇಳೆಯೂ ಪ್ರತಿಭಟನೆ ನಡೆಸಿದ್ದರು.

ಈ ಹೋರಾಟಕ್ಕೆ ಪ್ರತಿಯಾಗಿ ಇಂದು ರಾಜ್ಯದ ಸಂಸದರು ಪಕ್ಷ ಬೇಧ ಮರೆತು ಸಂಸತ್​ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಈ ಕುರಿತು ಈಗಾಗಲೇ ರಾಜ್ಯ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್​ ಕೂಡ ಸದಾನಂದ ಗೌಡ ಅವರ ಜೊತೆ ಕಳೆದವಾರ ಮಾತುಕತೆ ನಡೆಸಿದ್ದರು.

ಮೇಕೆದಾಟು ಯೋಜನೆ  ಮಾರಕವಾಗಲಿದ್ದು, ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು,  ಜಲ ಆಯೋಗ ನೀಡಿರುವ ಆರಂಭಿಕ ಒಪ್ಪಿಗೆಯನ್ನು ರದ್ದುಪಡಿಸುವಂತೆ ತಮಿಳುನಾಡು ಪ್ರತಿಭಟಿಸುತ್ತಿದೆ.

ಈ ಹಿನ್ನಲೆ ನಿನ್ನೆ ಕರ್ನಾಟಕ ಹಾಗೂ ತಮಿಳುನಾಡು ನಾಯಕರೊಂದಿಗೆ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್​ ಗಡ್ಕರಿ  ಚರ್ಚಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ ಮೇಕೆದಾಟು ಯೋಜನೆಯಿಂದಾಗಿ ಎರಡೂ ರಾಜ್ಯಗಳಿಗೆ ಲಾಭವಾಗಲಿದೆ, ಅದರಲ್ಲಿಯೂ ತಮಿಳುನಾಡಿಗೆ ಹೆಚ್ಚಿನ ಲಾಭ ದೊರೆಯಲಿದೆ ಎಂದು ಮನವರಿಕೆ ಮಾಡಿಕೊಡಿದ್ದಾರೆ.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ