ಬೆಂಗಳೂರು, ಡಿ.28- ಮಾನಸಿಕ ಖಿನ್ನತೆಯಿಂದಾಗಿ ಯುವತಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸದಾನಂದನಗರದ ವೀರತಿಪ್ಪಯ್ಯನಲೇಔಟ್ ಒಂದನೇ ಕ್ರಾಸ್ ನಿವಾಸಿ ಪೂಜಾ (23) ಆತ್ಮಹತ್ಯೆಗೆ ಶರಣಾದ ಯುವತಿ.
ಪೂಜಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ನಿನ್ನೆ ಇವರ ತಾಯಿ ನಗರದಲ್ಲೇ ಇರುವಂತಹ ತಂಗಿ ಮನೆಗೆ ಹೋಗಿದ್ದಾಗ ಮನೆಯಲ್ಲಿ ಒಬ್ಬರೇ ಇದ್ದ ಪೂಜಾ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರ ತಾಯಿ ಸಂಜೆ ಮನೆಗೆ ವಾಪಾಸಾಗಿ ಬಾಗಿಲು ತಟ್ಟಿದ್ದಾರೆ.ಬಾಗಿಲು ತೆರೆಯದಿದ್ದಾಗ ಕಿಟಕಿ ಮೂಲಕ ನೋಡಿದಾಗ ಪೂಜಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಸುದ್ದಿ ತಿಳಿದ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.