
ಬೆಂಗಳೂರು, ಡಿ.28- ವಯಕ್ತಿಕ ಕಾರಣದಿಂದ ಮನನೊಂದಿದ್ದ ಬಿಇಎಲ್ ಉದ್ಯೋಗಿಯೊಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಇಎಲ್ ಕ್ವಾರ್ಟಸ್ನಲ್ಲಿ ವಾಸವಾಗಿದ್ದ ಶ್ರೀನಿವಾಸನ್ (55) ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ಉದ್ಯೋಗಿ.
ಶ್ರೀನಿವಾಸನ್ ಅವರು ಮಾನಸಿಕ ಕಾರಣದಿಂದ ನೊಂದಿದ್ದರು ಎನ್ನಲಾಗಿದ್ದು, ನಿನ್ನೆ ಯಶವಂತಪುರ ಹಾಗೂ ಲೊಟ್ಟೆಗೊಲ್ಲಹಳ್ಳಿ ಮಧ್ಯೆ ಹಾದು ಹೋಗುವ ರೈಲ್ವೆ ಹಳಿ ಬಳಿ ಯಾವುದೋ ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.
ಬೆಳಗ್ಗೆ 8 ಗಂಟೆಗೆ ಮೃತದೇಹ ಪತ್ತೆಯಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಮೃತದೇಹವನ್ನು ಹಸ್ತಾಂತರಿಸಿದ್ದಾರೆ.
ಈ ಬಗ್ಗೆ ಯಶವಂತಪುರ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.