ನವದೆಹಲಿ: ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ರೈಲ್ವೇ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಬೆಂಗಳೂರು-ಶಿವಮೊಗ್ಗ ನಡುವೆ ಹಗಲು ಫಾಸ್ಟ್ ಎಕ್ಸ್ ಪ್ರೆಸ್ ಹೊಸ ರೈಲು ಸಂಚಾರ ಆರಂಭಿಸುವಂತೆ ಮನವಿ ಮಾಡಿದರು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ ಮತ್ತು ಶೃಂಗೇರಿ ಮಾರ್ಗವಾಗಿ ಶಿವಮೊಗ್ಗ-ಮಂಗಳೂರು ನಡುವಿನ ಹೊಸ ಮಾರ್ಗದ ಸರ್ವೆ ಕಾರ್ಯವನ್ನು ತ್ವರಿತ ಗೊಳಿಸುವಂತೆಯೂ ಅವರು ಕೋರಿದರು .
ಶಿವಮೊಗ್ಗ-ಬೀರೂರು ಜೋಡಿ ಮಾರ್ಗ,ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಬೇಕೆಂದು ಮನವಿ ಮಾಡಿದರು.