ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಐವರು ಹಿರಿಯ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಮುಂಬೈನ ಚೆಂಬೂರ್ ಉಪನಗರದ ತಿಲಕ್ನಗರ ಪ್ರದೇಶದ ಗಣೇಶ ಗಾರ್ಡನ್ ಸಮೀಪ ಇರುವ ಸರ್ಗಮ್ ಸೊಸೈಟಿ ಕಟ್ಟಡದ 11ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ 15 ಅಗ್ನಿ ಶಾಮಕ ವಾಹನಗಳನ್ನು ಬೆಂಕಿಯನ್ನು ನಂದಿಸಿದ್ದಾರೆ. ಐವರು ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ.
ಅಗ್ನಿ ಅವಘಡದಲ್ಲಿ ಸುನಿತಾ ಜೋಷಿ (72), ಸುಮನ್ ಶ್ರೀನಿವಾಸ ಜೋಷಿ (83), ಸರಳಾ ಸುರೇಶ್ ಗಂಗರ್ (52), ಬಾಲಚಂದ್ರ ಜೋಷಿ (72) ಮತ್ತು ಲಕ್ಷ್ಮೀಬೆನ್ ಪ್ರೇಮ್ಜಿ ಗಂಗರ್ (83) ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ನಂದಿಸುವಾಗ ಅಗ್ನಿ ಶಾಮಕ ಸಿಬ್ಬಂದಿಯೊಬ್ಬರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿ ಅನಾಹುತಕ್ಕೆ ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಕಿ ಹೊತ್ತಿಕೊಂಡ ನಂತರ ಎಲ್ಪಿಜಿ ಸಿಲಿಂಡರ್ ಸಿಡಿದು ಬೆಂಕಿ ಇನ್ನಷ್ಟು ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Mumbai,Chembur highrise fire, 5 dead