ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕೆ ಹೊಡೆದ ಕಾರು, ಘಟನೆಯಲ್ಲಿ ಒಬ್ಬರ ಸಾವು

ಬೆಂಗಳೂರು, ಡಿ.28-ಸ್ನೇಹಿತರಿಬ್ಬರು ಕಾರಿನಲ್ಲಿ ಹೋಗುತ್ತಿದ್ದಾಗ ಅತಿ ವೇಗ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಒಬ್ಬಾತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಕೋಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ವೈಟ್‍ಫೀಲ್ಡ್ ನಿವಾಸಿ, ಕಾರು ಚಾಲಕ ಸೈಯ್ಯದ್ ಮುಜಾಯಿದ್(33) ಮೃತಪಟ್ಟ ದುರ್ದೈವಿ.

ಇಂದು ಬೆಳಗಿನ ಜಾವ 2.20ರಲ್ಲಿ ಜಯದೇವ ಆಸ್ಪತ್ರೆ ಸಮೀಪವಿರುವ ಫ್ಲೈಓವರ್ ಮೇಲೆ ಸೈಯ್ಯದ್ ಮುಜಾಯಿದ್ ತನ್ನ ಸ್ನೇಹಿತನೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಹೋಗುತ್ತಿದ್ದರು.

ಈ ವೇಳೆ ಅತಿ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಸೈಯ್ಯದ್ ಮುಜಾಯಿದ್ ಸಾವನ್ನಪ್ಪಿದ್ದು, ಮತ್ತೊಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸುದ್ದಿ ತಿಳಿದ ಮೈಕೋಲೇಔಟ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ