ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಭಾಗಶಃ ಹಾನಿಗೊಂಡ ಬೈಕ್

ಬೆಂಗಳೂರು, ಡಿ.28- ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾಗಶಃ ಹಾನಿಯಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುರಬಿನಗರದ 7ನೇ ಮುಖ್ಯರಸ್ತೆ, 4ನೇ ಕ್ರಾಸ್‍ನ ಮನೆಯೊಂದರ ಮುಂದೆ ನಿಲ್ಲಿಸಲಾಗಿದ್ದ ಬೈಕ್‍ನಲ್ಲಿ ರಾತ್ರಿ ಸುಮಾರು 10.30ರಲ್ಲಿ ಬೆಂಕಿ ಕಾಣಿಸಿಕೊಂಡು ಶೇ.50ರಷ್ಟು ಭಾಗ ಸುಟ್ಟಿದೆ.

ತಕ್ಷಣ ನೆರೆಹೊರೆಯವರು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಕಾಣಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಬೈಕ್‍ನ ಪೆಟ್ರೋಲ್ ಟ್ಯಾಂಕ್‍ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರಬಹುದೇ ಅಥವಾ ಬ್ಯಾಟರಿ ಕಿಡಿಯಿಂದ ಈ ಘಟನೆ ನಡೆದಿದೆಯೇ ಎಂಬ ಬಗ್ಗೆ ಕೋಣನಕುಂಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ