ಪುಲ್ವಾಮಾದಲ್ಲಿ ನಾಲ್ವರು ಉಗ್ರರನ್ನು ಸದೆಬಡಿದ ಭದ್ರತಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು ಭಾರತೀಯ ಸೇನೆ ಉಗ್ರರ ವಿರುದ್ಧದ ಕಾರ್ಯಾಚರಣೆ ತೀರ್ವಗೊಳಿಸಿದೆ. ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಸದೆಬಡಿದಿವೆ.

ಪುಲ್ವಾಮ ಜಿಲ್ಲೆಯ ರಾಜ್ಪೊರದಲ್ಲಿ ಉಗ್ರರು ದಾಳಿ ನಡೆಸಿದ್ದು, ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಉಗ್ರರಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆ.

ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು 4 ಉಗ್ರರನ್ನು ಹತ್ಯೆ ಮಾಡಿದ್ದು, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಈ ನಡುವೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.

Jammu-Kashmir,Pulwama,4 Terrorists Shot Dead In Encounter,Security Forces

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ