ಬೆಂಗಳೂರು, ಡಿ.29-ರಾಜ್ಯದ ಐಪಿಎಸ್ ಅಧಿಕಾರಿ ವಿ.ಮಧುಕರ್ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅತ್ಯುತ್ತಮ ಅಧಿಕಾರಿಯಾಗಿದ್ದ ಅವರು, ನೇರ ನಡೆ, ನುಡಿಗಳಿಂದ ಜನಪ್ರಿಯರಾಗಿದ್ದರು.ಅವರ ಅಕಾಲಿಕ ನಿಧನ ತೀವ್ರ ಆಘಾತ ಉಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಹೈದರಾಬಾದ್ನಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು, ಆಸ್ಪತ್ರೆಗೆ ದಾಖಲಾಗಿರುವುದನ್ನು ತಿಳಿದು ಅಲ್ಲಿನ ವೈದ್ಯರೊಂದಿಗೆ ಮಾತನಾಡಿದ್ದೆ. ಸಾವಿನೊಂದಿಗೆ ಹೋರಾಡಿ ಜಯಿಸುವುದರೆಂದೇ ನಂಬಿದ್ದೆ ಎಂದು ಕಂಬನಿ ಮಿಡಿದರು.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ಆಘಾತ ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.