ಬೆಂಗಳೂರು, ಡಿ.29-ಖಡಕ್ ಐಪಿಎಸ್ ಅಧಿಕಾರಿ ಮಧುಕರ್ಶೆಟ್ಟಿ ಅವರ ಸಾವು ಸ್ವಾಭಾವಿಕವೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಹೇಳಿದರು.
ಮಧುಕರ್ಶೆಟ್ಟಿ ಅವರ ಸಾವಿಗೆ ಸಂತಾಪ ಸೂಚಿಸಿ ಪ್ರತಿಕ್ರಿಯೆ ನೀಡಿದ ಅವರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಮಧುಕರ್ಶೆಟ್ಟಿ ಅವರ ಸಾವು ಸಹಜವಾಗಿದೆಯೇ, ಅಸಹಜ ಸಾವೇ ಎಂಬ ಬಗ್ಗೆ ತನಿಖೆ ಮಾಡುವ ಅಗತ್ಯವಿದೆ ಎಂದು ಹೇಳಿದರು.
ನಿನ್ನೆ ರಾತ್ರಿ ವಿಷಯ ತಿಳಿದು ನನಗೆ ಆಶ್ಚರ್ಯವಾಯಿತು.ಇಷ್ಟು ಚಿಕ್ಕ ವಯಸ್ಸಿನಲ್ಲೇ ಅಕಾಲಿಕ ಮರಣಕ್ಕೀಡಾಗಿದ್ದು, ಅತ್ಯಂತ ದುಃಖದ ವಿಷಯ ಎಂದು ಹೇಳಿದರು.
ಅವರನ್ನು ನಾನು ಬಹಳ ಹತ್ತಿರದಿಂದ ಬಲ್ಲೆ.ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದರು.ಪೊಲೀಸ್ ಇಲಾಖೆಗೆ ಅತಿ ದೊಡ್ಡ ಆಸ್ತಿ.ಗೌರವಾನ್ವಿತ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದರು.
ಅವರ ಆತ್ಮಕ್ಕೆ ಶಾಂತಿ ದೊರೆಯಲಿ.ಅವರ ಕುಟುಂಬದವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.