ಬೆಂಗಳೂರು, ಡಿ.29-ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ಶೆಟ್ಟಿ ಅವರ ಅಂತ್ಯಸಂಸ್ಕಾರವನ್ನು ಅವರ ಹುಟ್ಟೂರಾದ ಕುಂದಾಪುರದಲ್ಲಿ ಸಕಲ ಸರ್ಕಾರಿ ಹಾಗೂ ಪೊಲೀಸ್ ಗೌರವಾದರಗಳೊಂದಿಗೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಯಲಹಂಕದ ಪೊಲೀಸ್ ಪರೇಡ್ ಮೈದಾನದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸಿದ್ದೇವೆ ಎಂದರು.
ಅವರ ಸ್ವಗ್ರಾಮಕ್ಕೆ ಪಾರ್ಥಿವ ಶರೀರವನ್ನು ರವಾನಿಸಲು ಪೊಲೀಸ್ ಇಲಾಖೆ ವ್ಯವಸ್ಥೆ ಕಲ್ಪಿಸಿದೆ ಎಂದು ತಿಳಿಸಿದರು.