ಬೆಂಗಳೂರು,ಡಿ.29- ನಿನ್ನೆ ನಿಧನರಾದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೈದರಾಬಾದ್ನ ಪೊಲೀಸ್ ಹಿರಿಯ ಅಧಿಕಾರಿಗಳು ಪಾರ್ಥೀವ ಶರೀರವನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟರು.
ಹೈದರಾಬಾದ್ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನದ ಮೂಲಕ ಪಾರ್ಥೀವ ಶರೀರವನ್ನು ತರಲಾಗುವುದು. ನಂತರ ರಸ್ತೆ ಮಾರ್ಗವಾಗಿ ಯಲಹಂಕದಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಆವರಣಕ್ಕೆ ತರಲಾಗುವುದು.
ಅಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅವರ ಸಹೋದ್ಯೋಗಿಗಳು, ಸಂಬಂಧಿಕರು, ಸ್ನೇಹಿತರು, ಹಿರಿಯ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.
ಸಂಜೆ 6 ಗಂಟೆಯ ನಂತರ ಯಲಹಂಕದಿಂದ ವಿಮಾನ ನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ಕೊಂಡೊಯ್ದು, ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಪಾರ್ಥೀವ ಶರೀರವನ್ನು ಕೊಂಡೊಯ್ಯಲಿದ್ದಾರೆ.ಅಲ್ಲಿಂದ ಅವರ ಹುಟ್ಟೂರಾದ ಯಡಾಡಿಗೆ ಮೃತದೇಹವನ್ನು ತೆಗೆದುಕೊಂಡು ಹೋಗಿ ನಾಳೆ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.