ಬೆಂಗಳೂರು, ಡಿ.29-ರಾಜ್ಯ ಕಂಡ ಅತ್ಯಂತ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನದಿಂದ ಕರ್ನಾಟಕ ಪೊಲೀಸ್ ಇಲಾಖೆಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ಕುಮಾರ್ ದುಃಖ ವ್ಯಕ್ತಪಡಿಸಿದ್ದಾರೆ.
ಮಧುಕರ್ಶೆಟ್ಟಿ ನಿಧನದಿಂದ ಖಡಕ್ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ.ಪ್ರಾಮಾಣಿಕ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಯುಕ್ತರು ಸಂತಾಪ ಸೂಚಿಸಿದ್ದಾರೆ.