ಬೆಂಗಳೂರು, ಡಿ.29- ವಿಶ್ವಮಾನವ ಕುವೆಂಪು ಹಾಗೂ ಮಾಜಿ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಸರ್ ಸಿ.ವಿ.ರಾಮನ್ನಗರ ವಿಧಾನಸಭಾ ಕ್ಷೇತ್ರದ ಕಗ್ಗದಾಸಪುರದ ಸರ್ಕಾರಿ ಶಾಲೆಯಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಈ ಮಹಾನ್ ವ್ಯಕ್ತಿಗಳ ಜನ್ಮ ದಿನದ ಪ್ರಯುಕ್ತ ಶಾಸಕ ಎಸ್.ರಘು ಅವರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ ಉಚಿತ ಪುಸ್ತಕಗಳನ್ನು ನೀಡಲಾಯಿತು. ಮಹಿಳೆಯರಿಗೆ ಹೊಲಿಗೆಯಂತ್ರ, ಬಡ ಜನರಿಗೆ ಕಂಬಳಿ ಹೊದಿಕೆಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ರಾಜಾರೆಡ್ಡಿ, ಉಪಾಧ್ಯಕ್ಷ ರವಿರೆಡ್ಡಿ, ಶಾಲಾ ಆಡಳಿತ ಮಂಡಳಿಯವರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.