ಅಗರ್ತಲಾ: ತ್ರಿಪುರಾ ಸ್ಥಳೀಯ ಸಂಸ್ಥೆ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ ಲಭಿಸಿದೆ. ಪಂಚರಾಜ್ಯಗಳ ಚುನಾವಣೆ ಸೋಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ಹೇಳಲಾಗಿತ್ತು. ಈಗ ತ್ರಿಪುರಾ ಚುನಾವಣೆಯ ಗೆಲುವು ಬಿಜೆಪಿಗೆ ಕೊಂಚ ನಿಟ್ಟುಸಿರು ಬಿಡುವಂತಾಗೆದೆ ಎಂದೇ ಹೇಳಬಹುದು.
ತ್ರಿಪುರ ಸ್ಥಳೀಯ ಸಂಸ್ಥೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು 158 ಸ್ಥಾನಗಳಲ್ಲಿ ಬಿಜೆಪಿ 157 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ತ್ರಿಪುರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಟ್ಟು 67ರಲ್ಲಿ 66 ಸ್ಥಾನಗಳು ಬಿಜೆಪಿ ಪಾಲಾಗಿವೆ. 158 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, 91 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಭರ್ಜರಿ ಜಯಕ್ಕೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ತ್ರಿಪುರ ಮುಖ್ಯಮಂತ್ರಿ ಬಿಪ್ಲವ್ ದೇವ್ ಹರ್ಷ ವ್ಯಕ್ತಪಡಿಸಿದ್ದಾರೆ.
Tripura,BJP, Wins Civic Body Polls