ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಮೈಸೂರು,ಡಿ.30- ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಮಂಡಿ ಠಾಣೆ ಪೆÇಲೀಸರು ಬಂಧಿಸಿ 260 ಗ್ರಾಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಸೈಯದ್ ಸುಹೇಲ್‍ಪಾಷ ಬಂಧಿತ ಆರೋಪಿ.
ಈತ ಮಂಡಿಮೊಹಲ್ಲದ ಎಂಕೆಡಿಕೆ ರಸ್ತೆಯ ಮನೆಯೊಂದರ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಗಸ್ತಿನಲ್ಲಿದ್ದ ಮಂಡಿ ಠಾಣೆ ಇನ್‍ಸ್ಪೆಕ್ಟರ್ ಅರುಣ್ ಮತ್ತು ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.
ಬಂಧಿತನಿಂದ 260 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ