ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ, ಘಟನೆಯಲ್ಲಿ ಚಾಲಕನ ಸಾವು

ಬೆಂಗಳೂರು,ಡಿ.30- ಅತಿವೇಗವಾಗಿ ಚಲಿಸಿದ ಆಟೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ಳಳ್ಳಿ ನಿವಾಸಿ ವಾಸಿಂ(30) ಮೃತಪಟ್ಟ ಆಟೋ ಚಾಲಕ. ನಿನ್ನೆ ರಾತ್ರಿ 8.45ರಲ್ಲಿ ವಾಸಿಂ ಇಟ್ಟಿಗೆ ಗೂಡು ಮುಖ್ಯರಸ್ತೆಯಲ್ಲಿ ಅತಿ ವೇಗವಾಗಿ ಆಟೋ ಚಲಾಯಿಸಿಕೊಂಡು ಹೋಗುತ್ತಿದ್ದಾಗ ತಿರುವಿನಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಆಟೋ ಉರುಳಿ ಬಿದ್ದಿದೆ. ತೀವ್ರ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಯಲಹಂಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ದೇಹವನ್ನು ವಾರಸುದಾರರಿಗೆ ನೀಡಲಾಗಿದೆ. ಯಲಹಂಕ ಸಂಚಾರಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ