ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು,ಡಿ.30- ಇಂದು ಬೆಳಗ್ಗೆ ಯಶವಂತಪುರ ರೈಲ್ವೆ ನಿಲ್ದಾಣ ಸಮೀಪ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
5.5 ಅಡಿ ಎತ್ತರವಿರುವ ಈ ವ್ಯಕ್ತಿಯು ಗೋಧಿ ಮೈಬಣ್ಣ, ಅಗಲವಾದ ಹಣೆ, ಅಗಲವಾದ ಕಿವಿ ಹೊಂದಿದ್ದಾರೆ.

ಮೃತ ವ್ಯಕ್ತಿಯು ತುಂಬುದೋಳಿನ ಬಿಳ್ಳಿ ಬಣ್ಣದ ಶರ್ಟ್ ಹಾಗೂ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಸಂಬಂಧಪಟ್ಟವರು ಯಾರಾದರೂ ಇದ್ದಲ್ಲಿ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ