ಗದಗದಲ್ಲಿ ಭೀಕರ ಅಪಘಾತ; ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ಸಾವು

ಗದಗ:  ಇಂದು ಮುಂಜಾನೆ ಗದಗದ ಕೊಪ್ಪಳ ರಸ್ತೆಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ  ಸ್ಥಳದಲ್ಲಿಯೇ 6 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೊಪ್ಪಳ ರಸ್ತೆಯ ಅಡವಿ‌ಸೋಮಾಪುರ ಬಳಿ ಘಟನೆ ನಡೆದಿದ್ದು, 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಅಗಸಿ ನಿವಾಸಿಗಳಾದ ಆನಂದ ಬೆಟಗೇರಿ, ಸಿದ್ದು ಕೋರಿಶೆಟ್ಟಿ, ಅಮೃತಾ, ಮನೋಜ ಕುಮಾರ್​ ಕರಡಿಗುಡ್ಡ, ಚನ್ನು ವಾಡದ್ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ.

ಅಡವಿಸೋಮಾಪುರದ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಬಳಿಕ ಎದುರಿನಿಂದ ಬರುತ್ತಿದ್ದ ಕಾರಿಗೆ ಜೋರಾಗಿ ಅಪ್ಪಳಿಸಿದೆ. ಇದರಿಂದ ಎದುರಿಂದ ವೇಗವಾಗಿ ಬರುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗದಗ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಸಾಗಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್​  ಮತ್ತು ಗದಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.  ಘಟನೆ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.                          

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ