ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಸಲ್ಲಿಸಲು ಆಹ್ವಾನ

ಬೆಂಗಳೂರು, ಡಿ.30- ಸಾರ್ವಜನಿಕ ಗ್ರಂಥಾಲಯ ಇಲಾಖೆ 2018 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2018 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ ಇಲ್ಲಿ 2019 ರ ಜನವರಿ 30 ರೊಳಗೆ ಕಾಪಿರೈಟ ಮಾಡಿಸಿರಬೇಕು.

ಕಾಪಿರೈಟ ಮಾಡಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ ವೀಧಿ, ಬೆಂಗಳೂರು 560 001 ಇಲ್ಲಿಗೆ ಜನವರಿ 31 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯ ದೂರವಾಣಿ ಸಂಖ್ಯೆ 080-22864990, 2286358 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ