ಬೆಂಗಳೂರು, ಡಿ.30-ವಿಧಾನಸಭೆ ಮತ್ತು ವಿಧಾನಪರಿಷತ್ನ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.
ಕಂದಾಯ, ಆರೋಗ್ಯ, ಶಿಕ್ಷಣ, ಪೊಲೀಸ್ ಇಲಾಖೆಯಲ್ಲಿರುವ ತಾಂತ್ರಿಕ ಸಿಬ್ಬಂದಿಗಳನ್ನು ಹೊರತುಪಡಿಸಿ ಸಿ ವೃಂದದ ಸಿಬ್ಬಂದಿಗಳನ್ನು ಮತ್ತು ಉಳಿದ ಎಲ್ಲಾ ಇಲಾಖೆಗಳ ಸಿ ವೃಂದದ ಸಿಬ್ಬಂದಿಗಳನ್ನು ಶಾಸಕರು ಆಪ್ತ ಸಹಾಯಕರನ್ನಾಗಿ ನೇಮಕ ಮಾಡಿಕೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅವಕಾಶ ನೀಡಿದೆ.
ಅಲ್ಲದೆ, ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆಯು ಗುತ್ತಿಗೆ ಆಧಾರದ ನೇಮಕಾತಿಗೆ ನಿಗದಿಪಡಿಸಿರುವ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಅರ್ಹ ನಿವೃತ್ತ ನೌಕರರನ್ನು ಹಾಗೂ ಅರ್ಹ ಖಾಸಗಿ ವ್ಯಕ್ತಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತಾಸುಧಾರಣಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.