ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ಸಾವು

ಬೆಂಗಳೂರು, ಡಿ.30-ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾರುತಿನಗರ ನಿವಾಸಿ ಮನೋಹರ್(39) ಮೃತಪಟ್ಟ ದುರ್ದೈವಿ. ನಿನ್ನೆ ರಾತ್ರಿ 10.30ರಲ್ಲಿ ಬೆಂಗಳೂರು-ಬಳ್ಳಾರಿ ರಸ್ತೆ, ಸ್ವಾತಿ ಹೊಟೇಲ್ ಬಳಿ ಮನೋಹರ್ ರಸ್ತೆ ದಾಟುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದು ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ತೀವ್ರ ಗಾಯಗೊಂಡಿದ್ದ ಮನೋಹರ್‍ನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮೃತದೇಹ ಇಡಲಾಗಿದೆ. ಹೆಬ್ಬಾಳ ಸಂಚಾರಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ