ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವು ಮತ್ತೊಬ್ಬರಿಗೆ ಗಂಭೀರ ಗಾಯ

ಹಾಸನ,ಡಿ.31- ಹೊಸ ವರ್ಷದ ಸಂಭ್ರಮಾಚರಣೆಗೆ ಬಂದಿದ್ದ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಸಂಜಯ್(27) ಮತ್ತು ರಾಹುಲ್ ಜೋಸ್ಲಿ(32) ಮೃತ ದುರ್ದೈವಿಗಳು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಅನೀಸ್ ಡಿಸೋಜಾರವರನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನ ಮೂಲದವರಾದ ಮೃತರು ಕುಟುಂಬ ಸಮೇತ ಹೊಸ ವರ್ಷಾಚರಣೆ ಹಿನ್ನೆಲೆ ಮಂಗಳೂರಿಗೆ ತೆರಳಿ, ನಂತರ ಸಕಲೇಶಪುರದ ದೊಡ್ಮನೆ ರೆಸಾರ್ಟ್‍ನಲ್ಲಿ ತಂಗಿದ್ದರು.

ಮಗುವಿಗೆ ಹಾಲು ಬೇಕಾಗಿದ್ದರಿಂದ ಸಂಜಯ್ ಹಾಗೂ ರಾಹುಲ್ ಜೋಸ್ಲಿ ಮತ್ತು ಅನಿಸ್ ತಮ್ಮ ಕಾರಿನಲ್ಲಿ ಸಕಲೇಶಪುರಕ್ಕೆ ಬರುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವಿಷಯ ತಿಳಿದ ಸಕಲೇಶಪುರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಪಘಾತ ಕಾರಣ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ