ನವದೆಹಲಿ: ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. ಆದರೆ, ರಾಜ್ಯಸಭೆಯಲ್ಲಿ ಇಂದು ವಿಧೇಯಕ ಮಂಡನೆಯಾಗಿ ಚರ್ಚೆ ನಡೆಯಲಿದೆ. ಕಳೆದ ಬಾರಿ ಲೋಕಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದ್ದರೂ, ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲದೇ ಇರುವುದರಿಂದ ಅಂಗೀಕಾರಗೊಂಡಿರಲಿಲ್ಲ. ಹೀಗಾಗಿ ಸರ್ಕಾರ ತ್ರಿವಳಿ ತಲಾಖ್ ಕಾಯ್ದೆಗೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿತ್ತು.
ಈ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಸದಸ್ಯರಿಗೆ ರಾಜ್ಯಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಈ ಸಂಬಂಧ ಇವತ್ತು ಬಿಸಿ ಬಿಸಿ ಚರ್ಚೆ ನಡೆಯಲಿದೆ. ಲೋಕಸಭೆಯಲ್ಲಿ ಜಂಟಿ ಸದನ ಸಮಿತಿ ರಚನೆಗೆ ಪ್ರತಿಪಕ್ಷಗಳು ಒತ್ತಾಯಿಸುವ ಸಾಧ್ಯತೆ ಇದೆ. ಲೋಕಸಭೆಯಲ್ಲಿನ ನಿರ್ಣಯಕ್ಕೆ ಬದ್ಧವಾಗಿರುವ ಸಾಧ್ಯತೆಗಳಿವೆ.
ಎಐಎಡಿಎಂಕೆ ಸಹ ಬಿಲ್ ವಿರೋಧಿಸಿದೆ. ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತದ ಕೊರತೆ ಇದೆ. ಹೀಗಾಗಿ ವಿಧೇಯಕಕ್ಕೆ ಅಂಗೀಕಾರ ಸಿಗುತ್ತಾ ಅನ್ನೋ ಕುತೂಹಲವಿದೆ.