ಮಿಂಚಿನ ಓಟ ಚಿತ್ರದ ಅಂಕಲ್ ಪಾತ್ರದ ಮೂಲಕ ಖ್ಯಾತಿಯ ಉತ್ತುಂಗಕ್ಕೆ ಏರಿದ್ದ ಲೋಕನಾಥ್

ಬೆಂಗಳೂರು: ಚಿತ್ರರಂಗದಲ್ಲಿ ಅಂಕಲ್ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ ಲೋಕನಾಥ್ ಅವರು ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಮಿಂಚಿನ ಓಟ ಚಿತ್ರದ ಅಂಕಲ್ ಪಾತ್ರದ ಮೂಲಕ ಖ್ಯಾತಿಯ ಉತ್ತುಂಗಕ್ಕೆ ಏರಿದ್ದರು. ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು  1972 ರಿಂದ  ‘ ನಟರಂಗ’ದ ಪ್ರಮುಖ ನಟನಾಗಿ ‘ಸಮುದಾಯ’  ‘ಸೂತ್ರದಾರ’  ತಂಡಗಳ ಸುಮಾರು 1000 ಪ್ರದರ್ಶನಗಳಲ್ಲಿ ಭಾಗವಹಿಸಿದ್ದರು. ಭೂತಯ್ಯನ ಮಗ ಅಯ್ಯು ಸೇರಿದಂತೆ 650ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ

 

ಜೀವನ: ಲೋಕನಾಥರು ಜನಿಸಿದ್ದು ಆಗಸ್ಟ್ 14, 1927 ರಂದು. ಶಿಸ್ತುಬದ್ಧ ಜೀವನದ, ರಂಗಭೂಮಿ, ಚಲನಚಿತ್ರದ ಮೇರು ಕಲಾವಿದರಾದ ಲೋಕನಾಥ್ರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ ಹನುಮಂತಪ್ಪನವರು ಮತ್ತು ತಾಯಿ ಗೌರಮ್ಮನವರು. ಅವರದ್ದು ಜವಳಿ ವಾಣಿಜ್ಯ ವಹಿವಾಟಿನ ಕುಟುಂಬ. ಹೆಣ್ಣು, ಗಂಡು ಮಕ್ಕಳು ಎಂಬ ಭೇದವಿಲ್ಲದೆ ಸಂಜೆಯ ಒಳಗೆ ಮನೆ ಸೇರಬೇಕು ಎಂಬಂತಹ ಕಟ್ಟುಪಾಡಿನ ವಾತಾವರಣವಿದ್ದದು ಅವರ ಕುಟುಂಬ. ಸುಮಾರು 40 ಜನರಿದ್ದ ಸಂಪ್ರದಾಯಸ್ತ ಅವಿಭಕ್ತ ಕುಟುಂಬದಲ್ಲಿ ಬೆಳೆದರು.

ಮೂಲತ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಲೋಕನಾಥರು ಕುಟುಂಬದ ವ್ಯಾಪಾರಕ್ಕೆ ಆಸರೆಯಾಗಿರಲು ಓದು ಬಿಟ್ಟರು. ಮನೆಯಲ್ಲಿದ್ದ ವೇಳೆಯಲ್ಲಿ ಸಂಗೀತದ ಮೇಲಿನ ಆಸೆಯಿಂದ ಸಂಗೀತವನ್ನು ಸುಮ್ಮನೆ ಗುನುಗುತ್ತಿದ್ದರು. ತಬಲಾ ಕಲಿಯಬೇಕೆಂಬ ಆಸೆಗೆ ತಬಲಾ ತಂದಿಟ್ಟುಕೊಂಡಾಗ ಮನೆಯ ವಾತಾವರಣ ಅದಕ್ಕೆ ಸರಿಹೋಗುವುದಿಲ್ಲ ಎಂದು ಅದನ್ನು ಕೈ ಬಿಟ್ಟರು.

ರಂಗಭೂಮಿವ್ಯಾಯಾಮ ಕಲಿಯಬೇಕೆಂದು ಪ್ರಖ್ಯಾತ ಬರಹಗಾರ ಹಾಗೂ ಅಂಗಸೌಷ್ಟವದ ಮೇರು ಆಚಾರ್ಯರಾದ ಕೆ.ವಿ. ಅಯ್ಯರ್ ಬಳಿ ಸೇರಿಕೊಂಡರು. ಬಳಿಕ ಅಲ್ಲಿಂದಲ್ಲೇ ಕೈಲಾಸಂ ಅವರಿಂದಾಗಿ ನಾಟಕರಂಗಕ್ಕೆ ಪ್ರವೇಶ ಮಾಡಿದರು. ಮುಂದೆ 19562 ರಲ್ಲಿರವಿ ಕಲಾವಿದರುಸಂಸ್ಥೆ ಸೇರಿ ಅಭಿನಯಿಸಿದ ಮೊದಲ ನಾಟಕಬಂಡವಾಳವಿಲ್ಲದ ಬಡಾಯಿ’. ಒಲ್ಲೆನೆಂದರೂ ಬಿಡದೆ ಮತ್ತೊಮ್ಮೆ ಬಣ್ಣ ಹಚ್ಚಿದ್ದು ದಾಶರಥಿ ದೀಕ್ಷಿತರಅಳಿಯ ದೇವರುನಾಟಕದಲ್ಲಿ ಎನ್ನುತ್ತಿದೆ ಇತಿಹಾಸ.

ಹೀಗೆ ಸಂಪ್ರದಾಯಸ್ಥ ಕುಟುಂಬದ ವಿರೋಧದ ನಡುವೆ ರಂಗಭೂಮಿ ಪ್ರವೇಶ ಮಾಡಿದ ಲೋಕನಾಥರು ರಕ್ತಾಕ್ಷಿ, ವಿಗಡ ವಿಕ್ರಮರಾಯ, ಬಿರುದಂತೆಂಬರ ಗಂಡ, ಬಹದ್ದೂರ್ ಗಂಡು, ಬಿಡುಗಡೆ, ಚಂದ್ರಹಾಸ, ಮನವೆಂಬ ಮರ್ಕಟ ನಾಟಕಗಳಲ್ಲಿ ಪ್ರಮುಖ ಪಾತ್ರ ವಹಿಸಿ ಅಪಾರ ಖ್ಯಾತಿ ಗಳಿಸಿದರು. ಮರಾಠಿ ನಾಟಕಗಳ ಅನುವಾದವಾದತನುವು ನಿನ್ನದೆ ಮನವು ನಿನ್ನದೆ (ನೂರಾರು ಪ್ರದರ್ಶನ ಕಂಡ ನಾಟಕ)’, ‘ನಾನೇನು ಹೇಳಬೇಕು’, ‘ಹಂಚುಬೆಳದಿಂಗಳುಮುಂತಾದ ನಾಟಕಗಳನ್ನು ನಿರ್ದೇಶಿಸಿದರು. ಬಿ.ವಿ. ಕಾರಂತರ ನಿರ್ದೇಶನದ ಗೋಸ್ಟ್‌, ಈಡಿಪಸ್‌, ನಾಗೇಶರ ನಿರ್ದೇಶನದ ನಾಟಕಗಳು, ಸಮುದಾಯದ ಪ್ರಸನ್ನರ ತಾಯಿ, ಗೆಲಿಲಿಯೋ ಮುಂತಾದವು ಅವರಿಗೆ ಮತ್ತಷ್ಟು ಖ್ಯಾತಿ ತಂದುಕೊಟ್ಟವು.

ಕಾಲೇಜಿನ ಪಠ್ಯ ಪುಸ್ತಕವಾಗಿದ್ದದ 272 ಪುಟಗಳ ಗೆಲಿಲಿಯೋ ನಾಟಕದಲ್ಲಿ ಪ್ರಾರಂಭದಿಂದ ಕೊನೆಯ ದೃಶ್ಯದವರೆಗೂ ಗೆಲಿಲಿಯೋ ಪಾತ್ರದಾರಿ ಆದ ಲೋಕನಾಥರು ರಂಗದ ಮೇಲಿರಬೇಕಿತ್ತು. ಸಂಭಾಷಣೆಗಳನ್ನು ಎಲ್ಲಿಯೂ ತಪ್ಪದೆ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ನಾಟಕ ಯಶಸ್ವಿಯಾಯಿತು. ಈಗಲೂಅದು ನನ್ನ ಬದುಕಿನ ಅವಿಸ್ಮರಣಿಯ ಕ್ಷಣಎನ್ನುತ್ತಾರೆ ಲೋಕನಾಥ್.

 ಚಿತ್ರರಂಗ: ‘ಸಂಸ್ಕಾರ ಮೂಲಕ ಚಿತ್ರರಂಗ ಪ್ರವೇಶಿಸಿದರಾದರೂ, ‘ಗೆಜ್ಜೆಪೂಜೆಅವರ ಮೊದಲು ಬಿಡುಗಡೆಯಾದ ಚಿತ್ರ. ಮುಂದೆ ಬಂಗಾರದ ಮನುಷ್ಯ, ದೂರದ ಬೆಟ್ಟ, ಭೂತಯ್ಯನ ಮಗ ಅಯ್ಯ, ಶರಪಂಜರ, ನಾಗರಹಾವು, ಹೇಮಾವತಿ, ಬಂಗಾರದ ಪಂಜರ, ಹೃದಯ ಸಂಗಮ, ಕೃಷ್ಣ ರುಕ್ಮಿಣಿ ಸತ್ಯಭಾಮ, ಭಾಗ್ಯಜ್ಯೋತಿ, ಕೂಡಿ ಬಾಳೋಣ, ಮಿಂಚಿನ ಓಟ, ಹೊಸ ನೀರು, ಮನೆ ಮನೆ ಕಥೆ, ಒಲವಿನ ಆಸರೆ ಹೀಗೆ ಅವರು ನಟಿಸಿದ ಚಿತ್ರಗಳ ಸಂಖ್ಯೆ ಸುಮಾರು 650 ಸಮೀಪದ್ದು.

 

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ