ಬೆಂಗಳೂರು,ಡಿ.31- ಕನ್ನಡದ ಹಿರಿಯ ನಟ ಲೋಕನಾಥ್ ನಿಧನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಒಂದು ಸಾವಿರ ನಾಟಕಗಳು, 650ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿರುವ ಲೋಕನಾಥ್ ಕನ್ನಡ ಚಿತ್ರರಂಗ ಕಂಡ ಅದ್ಭುತ ಕಲಾವಿದರಲ್ಲಿ ಒಬ್ಬರು.
ನಟರಂಗದ ಮೂಲಕ ರಂಗಭೂಮಿ ಪ್ರವೇಶಿಸಿದ ಅವರು ಅಂದಿನಿಂದಲೂ ನಿರಂತರವಾಗಿ ಅಭಿನಯಿಸುತ್ತ ಬಂದವರು. ಭೂತಯ್ಯನ ಮಗ ಅಯ್ಯು, ಮಿಂಚಿನ ಓಟ ಚಿತ್ರಗಳು ಜನರ ಮನಸ್ಸಿನಲ್ಲಿ ಸದಾ ಹಸಿರಾಗಿವೆ. ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಸನ್ಮಾನಗಳಿಗೆ ಭಾಜನರಾಗಿದ್ದ ಅವರ ನಿಧನದಿಂದ ಕನ್ನಡ ಚಿತ್ರರಂಗ ಅಭಿಜಾತ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.