ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಸೇರಿದಂತೆ 3 ಮಂದಿ ದೆಹಲಿಯ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಶರಣಾದ ಮಾಜಿ ಶಾಸಕರಾದ ಕಿಶಾನ್ ಖೋಖರ್ ಮತ್ತು ಮಹೇಂದರ್ ಯಾದವ್ ಅವರಿಗೆ ದೆಹಲಿ ನ್ಯಾಯಾಲಯ 10 ವರ್ಷ ಸೆರೆವಾಸ ಶಿಕ್ಷೆ ವಿಧಿಸಿದೆ. ಆದರೆ ಸಜ್ಜನ್ ಅವರು ಶರಣಾಗಲು ನೀಡಿರುವ ಅವಧಿಯನ್ನು 2019ರ ಜನವರಿ 31ರವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು. ಈ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಡಿಸೆಂಬರ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೊತೆಗೆ ಡಿಸೆಂಬರ್ 31ರೊಳಗೆ ಶರಣಾಗುವಂತೆ ಸಜ್ಜನ್ ಅವರಿಗೆ ನ್ಯಾಯಾಲಯ ಸೂಚಿಸಿತ್ತು.