ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ: 10 ಜನರ ಸಾವು

ಕಚ್‌: ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಜನ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಕಚ್‌ ಜಿಲ್ಲೆಯಲ್ಲಿ ನಡೆದಿದೆ.

ಬಚುವಾ ಹೆದ್ದಾರಿಯಲ್ಲಿ ಉಪ್ಪನ್ನು ಕೊಂಡೊಯ್ಯುತ್ತಿದ್ದ ಟ್ರೈಲರ್‌ ಟ್ರಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಮೇಲಕ್ಕೆ ಹಾರಿ ಪಕ್ಕದ ಲೇನ್‌ಗೆ ಬಿದ್ದಿದೆ. ಬಳಿಕ 11 ಜನರನ್ನು ಹೊತ್ತೊಯ್ಯುತ್ತಿದ್ದ ಸ್ಪೋರ್ಟ್ಸ್‌ ಯುಟಿಲಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಇದೇ ವೇಳೆ ಮತ್ತೊಂದು ಟ್ರಕ್‌ ಕೂಡ ಎಸ್‌ಯುವಿಗೆ ಹಿಂದಿನಿಂದ ಬಂದು ಡಿಕ್ಕಿಹೊಡೆದಿದೆ. ಇದರಿಂದಾಗಿ 10 ಜನರು ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಬಚುವಾದಿಂದ ಗುಜರಾತ್‌ನ ಬುಜ್‌ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Gujarat, 10 members of same family killed,road accident,SUV gets crushed between 2 trucks

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ