ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯ ಆತ್ಮಹತ್ಯೆ

ಬೆಂಗಳೂರು,ಡಿ.31- ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುರುಬರಹಳ್ಳಿಯ ಜೆಸಿನಗರದ 13ನೇ ಕ್ರಾಸ್, 1ನೇ ಮುಖ್ಯರಸ್ತೆ ನಿವಾಸಿ ಶಕ್ತಿವೇಲು ಅಲಿಯಾಸ್ ರವಿ(50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ವೃತ್ತಿಯಲ್ಲಿ ವೆಲ್ಡರ್ ಆಗಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ.

ಪತ್ನಿ ಊರಿಗೆ ತೆರಳಿದ್ದು, ನಿನ್ನೆ ಮಗ ಹೊರಗೆ ಹೋಗಿದ್ದಾಗ ಶಕ್ತಿವೇಲು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾತ್ರಿ 7 ಗಂಟೆಗೆ ಮಗ ಮನೆಗೆ ವಾಪಸ್ಸಾದಾಗಲೇ ಇವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ