ಲೋಕಸಭಾ ಚುನಾವಣೆ: ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಂಗಳೂರು: ದಕ್ಷಿಣ ಭಾರತದ ಜನಪ್ರಿಯ ನಟ, ನಿರ್ದೇಶಕ ಪ್ರಕಾಶ್ ರೈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮೂಲಕ ರಾಜಕೀಯ ರಂಗಕ್ಕೆ ರೈ ಅಧಿಕೃತವಾಗಿ ಪದಾರ್ಪಣೆ ಮಾಡಲಿದ್ದಾರೆ.

ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಆರಂಭ… ಹೊಸ ಜವಾಬ್ದಾರಿ… ನಿಮ್ಮೆಲ್ಲರ ಸಹಕಾರದೊಂದಿಗೆ ನಾನು ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ. ಯಾವ ಕ್ಷೇತ್ರ, ಮುಂದೇನು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತೇನೆ ಎಂದೂ ತಿಳಿಸಿದ್ದಾರೆ.

ಅಲ್ಲದೇ ಅಬ್‌ ಕಿ ಬಾರ್‌ ಜನತಾ ಕಿ ಸರಕಾರ್‌ ಎಂದೂ ಹೇಳಿರುವ ಪ್ರಕಾರ್ಶ್ ರೈ #JustAsking ಮತ್ತು ನಾಗರಿಕರ ಧ್ವನಿ ಸಂಸತ್​ನಲ್ಲೂ ಕೇಳಿಸಲಿದೆ ಎಂದು ತಿಳಿಸಿದ್ದಾರೆ.

Actor Prakash Rai to contest 2019 LS elections as independent

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ