ಗುಡಿಸಲಿಗೆ ನುಗ್ಗಿದ ಜಾನುವಾರು ಸಾಗಿಸುತ್ತಿದ್ದ ಟ್ರಕ್: 7 ಮಂದಿ ಸಾವು

ಲಖನೌ: ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧ ನಿರ್ಲಕ್ಷ್ಯದ ಕಾರಣ ಸ್ಥಳೀಯ ಪೊಲೀಸ್ ಠಾಣೆಯ ಮೂವರು ಪೊಲೀಸರು ಹಾಗೂ ಒಬ್ಬ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತುಗೊಳಿಸಿದೆ.

ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ಪೊಲೀಸ್ ವ್ಯಾನ್ ಬೆನ್ನತ್ತಿದೆ. ಈ ಸಂದರ್ಭದಲ್ಲಿ ವೇಗದ ಮೇಲೆ ನಿಯಂತ್ರಣ ಸಾಧಿಸಲಾಗಿದೆ ಎಂದು ಟ್ರಕ್ ಚಾಲಕ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡಿಸಿದ್ದಾನೆ. ಬಳಿಕ ಕಾಳು ರಾಮ್ ಎಂಬವರ ಗುಡಿಸಲಿಗೆ ನುಗ್ಗಿಸಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಮನೆಯಿಂದ ಹೊರಗಡೆ ಇದ್ದ ಕಾಳು ರಾಮ್ , ಆತನ ಮಗ ಹಾಗೂ ಸೊಸೆ ಮಾತ್ರ ಉಳಿದುಕೊಂಡಿದ್ದು, ಉಳಿದ ಏಳು ಮಂದಿ ಮೃತಪಟ್ಟಿದ್ದಾರೆ.

ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಬರುವವರೆಗೂ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ನೀಡುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಎನ್ ಎಸ್ ಚಾಹಲ್, ಎಸ್ಪಿ ಸಂತೋಷ್ ಕುಮಾರ್ ಸಿಂಗ್ ಹಾಗೂ ಎಎಸ್ ಪಿ ವಿರೇಂದ್ರ ಯಾದವ್, ನಿರ್ಲಕ್ಷ್ಯ ಆರೋಪದ ಮೇರೆಗೆ ಮೂವರು ಪೊಲೀಸರು ಹಾಗೂ ಒಬ್ಬ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

7 crushed to death,UPby truck

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ