ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ನಟ ಪ್ರಕಾಶ್ ರೈ

ಬೆಂಗಳೂರು,ಜ.1- ಜನಪ್ರಿಯ ನಟ ಪ್ರಕಾಶ್ ರೈ ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ.

ಯಾವುದೇ ರಾಜಕೀಯ ಪಕ್ಷದಿಂದ ಕಣಕ್ಕಿಳಿಯುವ ಬದಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ರಾಜ್ಯದ ಲೋಕಸಭಾ ಕ್ಷೇತ್ರವೊಂದರಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದು, ಆ ಕ್ಷೇತ್ರ ಯಾವುದೆಂಬುದನ್ನು ಅವರು ಇನ್ನು ಸ್ಪಷ್ಟಪಡಿಸಿಲ್ಲ.

ರಾಜಕೀಯ ಪ್ರವೇಶಿಸು ಟ್ವಿಟರ್‍ನಲ್ಲಿ ಮ್ಮ ಅಭಿಪ್ರಾಯ ಹಂಚಿಕೊಂಡಿರುವ ಪ್ರಕಾಶ್ ರೈ, ನೂತನ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ವರ್ಷದಲ್ಲಿ ಹೆಚ್ಚು ಜವಾಬ್ದಾರಿ ಇದ್ದು, ಜನರ ಬೆಂಬಲದೊಂದಿಗೆ ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ. ಶೀಘ್ರದಲ್ಲೇ ತಾನು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ವಿವರಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.

ಈ ಬಾರಿ ಜನತಾ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಪ್ರಕಾಶ್ ರೈ ರಾಜಕೀಯ ಪ್ರವೇಶಿಸುತ್ತಿರುವುದು ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ