ಬೇಸಿಗೆ ಬೆಳೆ ಬೆಳೆಯಲು ನಾಳೆಯಿಂದ ಭದ್ರಾ ಡ್ಯಾಂನಿಂದ ನೀರು ಹರಿಸುವಂತೆ ಸೂಚನೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.1-ಬೇಸಿಗೆ ಹಂಗಾಮಿನ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಭದ್ರಾ ಜಲಾಶಯದಿಂದ ನಾಳೆಯಿಂದ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ಬೇಸಿಗೆ ಬೆಳೆಗಳನ್ನು ಬೆಳೆಯಲು ಹಾಗೂ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಅನುಕೂಲವಾಗುವಂತೆ ಲಕ್ಕವಳ್ಳಿಯ ಭದ್ರಾ ಅಣೆಕಟ್ಟಿನಿಂದ ಭದ್ರಾ ಬಲ ಮತ್ತು ಎಡ ದಂಡೆ ನಾಲೆಗಳಿಗೆ ನೀರು ಹರಿಸಲು ಸೂಚಿಸಿದ್ದಾರೆ.

ರೈತರ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಜಲಸಂಪನ್ಮೂಲ ಇಲಾಖಾ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದು ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.

ಯಾವುದೇ ಕಾರಣಕ್ಕೂ ರೈತರ ಬೆಳೆ ಹಾನಿಗೀಡಾಗದಂತೆ ಹಾಗೂ ರೈತರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ರೈತರ ಹಿತದೃಷ್ಠಿಯಿಂದ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ