ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕರಾಗಿದ್ದ ಡಾ.ರಮೇಶ್ ಬಾಬು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕರಾಗಿದ್ದ ಡಾ.ರಮೇಶ್ ಬಾಬು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.

ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಧ್ವಜ ನೀಡಿದ ಯಡಿಯೂರಪ್ಪ, ಡಾ.ರಮೇಶ್ ಬಾಬು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ