ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಲ್ಲ, ಎಚ್.ವಿಶ್ವನಾಥ್

ಬೆಂಗಳೂರು, ಜ.1-ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆರೋಗ್ಯ ಸಮಸ್ಯೆಯಿಂದಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಹಿಂಪಡೆಯುವಂತೆ ವರಿಷ್ಠರನ್ನು ಕೇಳಬೇಕೆಂದುಕೊಂಡಿದ್ದೇನೆ. ಜ.3 ರಂದು ಜೆಡಿಎಸ್ ಪಕ್ಷದ ಪ್ರಮುಖ ಸಭೆ ಇದ್ದು, ಅಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರೊಂದಿಗೆ ಈ ಸಂಬಂಧ ಮಾತುಕತೆ ನಡೆಸುವುದಾಗಿ ಹೇಳಿದರು.

ದೇವೇಗೌಡರು ಹಿರಿಯರಾಗಿದ್ದು, ಹೆಚ್ಚು ಅನುಭವ ಹೊಂದಿದ್ದಾರೆ. ತಮ್ಮ ಜೀವನದ ಸಂಧ್ಯಾಕಾಲದಲ್ಲಿ ಶಾಸಕರಾಗಲು ನನಗೊಂದು ಅವಕಾಶ ಮಾಡಿಕೊಟ್ಟರು. ಅವರು ಹೇಳಿದಂತೆ ನಡೆಯುತ್ತೇನೆ. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ