ಹೊಸ ವರ್ಷವನ್ನು ಸ್ವಾಗತಿಸಿದ ವಿಶ್ವದ ಮೊದಲ ನಗರ ಇದು!

Fireworks explode over the Sydney Harbour during New Year's Eve celebrations in Sydney, Tuesday, Jan. 1, 2019. (Brendan Esposito/AAP via AP)

ಆಸ್ಟ್ರೇಲಿಯಾ: ವಿಶ್ವದೆಲ್ಲೆಡೆ ಜನರು 2018ಕ್ಕೆ ವಿದಾಯ ಹೇಳಿ ಹೊಸ ವರ್ಷ 2019ನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇಲ್ಲೊಂದು ನಗರ ಇತರ ದೇಶಗಳಿಗಿಂತ ಮೊದಲೇ ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿದೆ.

ನ್ಯೂಜಿಲೆಂಡ್ ನ ಆಕ್ಲೆಂಡ್’ನಲ್ಲಿ ಸಾವಿರಾರು ಜನರು ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಾಚರಣೆ ಮಾಡಿದರು. ನ್ಯೂಜಿಲೆಂಡ್ ಬಳಿಕ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹೊಸ ವರ್ಷವನ್ನು ಸ್ವಾಗತಿಸಲಾಗುವುದು. ಸಿಡ್ನಿ ಒಪೇರಾ ಹೌಸ್’ನ ಪಟಾಕಿಗಳು ವಿಶ್ವದೆಲ್ಲೆಡೆ ಪ್ರಸಿದ್ಧವಾಗಿವೆ.

ವಿಶ್ವದ ಇತರ ದೇಶಗಳಂತೆ ಭಾರತದಲ್ಲಿಯೂ ಸಹ ಜನರು ಹೊಸ ವರ್ಷವನ್ನು ಸ್ವಾಗತಿಸಲು ಉತ್ಸುಕರಾಗಿ ಕಾಯುತ್ತಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿ, ಬೆಂಗಳೂರು, ಕೊಲ್ಕತ್ತಾ , ಮುಂಬೈ ಸೇರಿದಂತೆ ಇತರ ನಗರಗಳಲ್ಲಿ ಈಗಾಗಲೇ 2019ರ ಸ್ವಾಗತಕ್ಕೆ ಭರದ ಸಿದ್ಧತೆ ನಡೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ