
ಮಂಗಳೂರು,ಜ.2- ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿರುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅಸಮಾಧಾನ ಹೊರ ಹಾಕಿದ್ದಾರೆ.
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು ಇದರಿಂದ ಒಳ್ಳೆಯದಾಯಿತಲ್ಲವೇ, ಹಠ ತೊಟ್ಟವರಿಗೆ ಸಮಾಧಾನವಾಯಿತ್ತಲ್ಲವೇ? ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ.
ಈಗೆಲ್ಲಾ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರವಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.