ಜನವರಿ 8 ಮತ್ತು 9ರಂದು ರಾಜ್ಯಾದ್ಯಂತ ಸಾರ್ವತ್ರಿಕ ಮುಷ್ಕರ

ಬೆಂಗಳೂರು, ಜ.3- ಕೇಂದ್ರ ಸರ್ಕಾರದ ರೈತ ಹಾಗೂ ಜನವಿರೋಧಿ ನೀತಿ ಖಂಡಿಸಿ ಭಾರತ್ ಕಮ್ಯುನಿಸ್ಟ್ ಪಕ್ಷ ಹಾಗೂ ಎಸ್‍ಯುಸಿಐ ಜನವರಿ 8 ಮತ್ತು 9ರಂದು ರಾಜ್ಯಾದ್ಯಂತ ಸಾರ್ವತ್ರಿಕ ಮುಷ್ಕರ ಮಾಡಲು ನಿರ್ಧರಿಸಿದೆ ಎಂದು ಎಸ್‍ಯುಸಿಐ ರಾಜ್ಯ ಕಾರ್ಯದರ್ಶಿ ಉಮಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ಜನರಿಗೆ ಭರವಸೆಗಳನ್ನು ನೀಡಿತ್ತು. ಆದರೆ, ಇದುವರೆಗೆ ಯಾವ ಭರವಸೆಯನ್ನೂ ಈಡೇರಿಸದೆ ಅನ್ಯಾಯ ಮಾಡಿದೆ. ನಿರಂತರವಾಗಿ ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಗಳು, ಸರಕು-ಸಾಗಣೆ, ಸಾರಿಗೆ ವೆಚ್ಚಗಳು, ಕೃಷಿ ಉತ್ಪನ್ನಗಳ ಹೂಡಿಕೆಗಳಾದ ಬೀಜ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಹಾಗೂ ಕೃಷಿ ಉಪಕರಣಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಇದನ್ನೆಲ್ಲ ಖಂಡಿಸಿ ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಬಸವರಾಜ್, ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಸೇರಿದಂತೆ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ