ಎಲ್ ಒಸಿ ಬಳಿ ಭಾರೀ ಹಿಮಪಾತ: ಓರ್ವ ಯೋಧನ ಸಾವು

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ(ಎಲ್ಒಸಿ) ಭಾರೀ ಹಿಮಪಾತ ಸಂಭವಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸೇನಾ ಪೋಸ್ಟ್‌ ಮೇಲೆ ಹಿಮದಗಡ್ಡೆಗಳು ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮದ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಯೋಧರನ್ನು ತಕ್ಷಣ ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಓರ್ವ ಯೋಧ ಸಾವನ್ನಪ್ಪಿದ್ದಾರೆ. ಮೃತ ಯೋಧನನ್ನು ಲ್ಯಾನ್ಸ್‌ ನಾಯಕ್‌ ಸಪನ್‌ ಮೆಹ್ರಾ ಎಂದು ತಿಳಿದುಬಂದಿದೆ.

ಗಾಯಗೊಂಡಿರುವ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

snowfall, near LoC,Army jawan, dies

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ