
ಬೆಂಗಳೂರು, ಜ.3- ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರ ಸಂಬಂಧ, ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿರುವ ಅವರು, ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಅಹಂಕಾರದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ ಎಂದು ಆರೋಪ ಮಾಡಿದ್ದಾರೆ.
ಸುಪ್ರಿಂಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.
ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ ಎಂದು ಕೇರಳ ಸರ್ಕಾರದ ವಿರುದ್ದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.