ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬಕ್ಕೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಹೌದು, ಡಿಕೆಶಿ ತಾಯಿ ಗೌರಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಕನಕಪುರದ ದೊಡ್ಡ ಆಲಹಳ್ಳಿಯ ನಿವಾಸದ ಮೇಲೆ ನೋಟಿಸ್ ಅಂಟಿಸಿದ್ದಾರೆ.
ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಗೌರಮ್ಮ ಅವರು ಮನೆಯಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳು ಮನೆಯ ಬಾಗಿಲಿನ ಮೇಲೆ ನೋಟಿಸ್ ಪ್ರತಿಯನ್ನು ಅಂಟಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.