
ಚಾಮರಾಜನಗರ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಆರೋಪಿಗಳು ಇಂದು ಕೊಳ್ಳೇಗಾಲದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಇಂದಿಗೆ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ರ ಹೊತ್ತಿಗೆ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಾದೇಶ, ದೊಡ್ಡಯ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದು, ಆರೋಪಿಗಳ ಪರ ಬೆಂಗಳೂರಿನ ವಕೀಲರೋರ್ವರು ಜಾಮೀನಿಗೆ ಅರ್ಜಿ ಸಲ್ಲಿಸುವರು ಎಂದು ಮೂಲಗಳು ತಿಳಿಸಿವೆ. ಭದ್ರತಾ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈಗಾಗಲೇ, ಮೈಸೂರು, ಚಾಮರಾಜನಗರ ಜಿಲ್ಲೆಗಳ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸದಂತೆ ಬಾರ್ ಕೌನ್ಸಿಲ್ ನಿರ್ಣಯ ಕೈಗೊಂಡಿದೆ.
Chamarajanagar,sulvadi temple, poison victims