ಅಯೋಧ್ಯೆ ರಾಮಮಂದಿರ ವಿವಾದ: ವಿಚಾರಣೆಯನ್ನು ಜ.10ಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ: ಅಯೋಧ್ಯೆ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿದೆ.

ಸಾರ್ವಜನವಿಕ ಹಿತಾಸಕ್ತಿಗಳ ಅರ್ಜಿಯ ವಿಚಾರಣೆ ಸುಪ್ರೀಂ ನಲ್ಲಿ ಇಂದು ನಡೆಯಬೇಕಿತ್ತು. ಆದರೆ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್ ಕೆ ಕೌಲ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಬೇಕಿತ್ತು. ಆದರೆ ಮತ್ತೆ ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದರು.

ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆಗೆ ನಿರಾಕರಿಸಿದ್ದ ನ್ಯಾಯಾಲಯ ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ಗೊತ್ತು ಎಂದು ಹೇಳಿ ವಿಚಾರಣೆಯನ್ನು ಜನವರಿ 4 ರಿಂದ ನಡೆಸುವುದಾಗಿ ಹೇಳಿತ್ತು. ಆದರೀಗ ಮತ್ತೆ ವಿಚಾರಣೆಯನ್ನು ಮುಂದೂಡಿದೆ.

ಕಳೆದ ಅಕ್ಟೋಬರ್ ನಲ್ಲೇ ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ